Monday, November 23, 2026
HomeBelagaviಎಂಇಎಸ್ ಪುಂಡಾಟಿಕಿಗೆ ಶಾಕ್ ಕೊಟ್ಟ ಕಮಿಷ್ನರ್ ಬೊರಸೆ

ಎಂಇಎಸ್ ಪುಂಡಾಟಿಕಿಗೆ ಶಾಕ್ ಕೊಟ್ಟ ಕಮಿಷ್ನರ್ ಬೊರಸೆ

ಬೆಳಗಾವಿ
ಬೆಳಗಾವಿಯಲ್ಲಿ ಎಂಇಎಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಗೆ ನಗರ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿ ಶಾಕ್ ನೀಡಿದೆ.
ಸರ್ಕಾರದ ಕನ್ನಡ ಕಡ್ಡಾಯ ನೀತಿಯನ್ನು ವಿರೋಧಿಸಿ ಎಂಇಎಸ್ ಕಾರ್ಯಕರ್ತರು ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮೀಷನರ್ ಅವರಿಗೆ ಮನವಿ ಸಲ್ಲಿಸಿ ಅನುಮತಿ ಕೋರಲಾಗಿತ್ತು. ಆದರೆ, ರ್ಯಾಲಿಗೆ ಅನುಮತಿ ನೀಡಿದರೆ ಉಗ್ರ ಹೋರಾಟ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಮುನ್ನೆಚ್ಚರಿಕೆ ನೀಡಿದ್ದವು. ಇದರಿಂದ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿತ್ತು.
ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ನಗರ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರ್ಯಾಲಿಗೆ ಅನುಮತಿ ನಿರಾಕರಿಸಿದ್ದಾರೆ.
ಪೊಲೀಸರ ಈ ಕ್ರಮದಿಂದ ಎಂಇಎಸ್ ಕಾರ್ಯಕರ್ತರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಮುಂದಿನ ನಡೆ ಕುರಿತು ಚರ್ಚೆಗಳು ನಡೆಯುತ್ತಿವೆ. ಇನ್ನೊಂದೆಡೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Total Views 60
RELATED ARTICLES

Most Popular

Recent Comments

KNN City News
Home
E-Paper