Monday, November 23, 2026
HomeBelagaviಸಚಿವ ಸತೀಶ್ ಅಳಿಯನ ಮನೆ ಮೇಲೆ ಇಡಿ ದಾಳಿ: ಬೆಂಗಳೂರಿನಲ್ಲಿ ಮಂಜುನಾಥ್ ಪತ್ತೆ

ಸಚಿವ ಸತೀಶ್ ಅಳಿಯನ ಮನೆ ಮೇಲೆ ಇಡಿ ದಾಳಿ: ಬೆಂಗಳೂರಿನಲ್ಲಿ ಮಂಜುನಾಥ್ ಪತ್ತೆ

ಬೆಳಗಾವಿ
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಅಳಿಯ ಹಾಗೂ ಬೆಳಗಾವಿಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗಾವಿ, ಮೈಸೂರು, ಬೆಂಗಳೂರು ಹಾಗೂ ಅರಸಿಕೇರೆ ಸೇರಿ ಒಟ್ಟು ಆರು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದ್ದು, ವೈ ಮಂಜುನಾಥಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ಮೈಸೂರಿನಲ್ಲಿರುವ ಸ್ನೇಹಿತೆಯ ಮನೆ, ಬೆಂಗಳೂರಿನ ಅಪಾರ್ಟ್ಮೆಂಟ್, ಹಾಸನ ಜಿಲ್ಲೆಯ ಅರಸಿಕೇರೆಯಲ್ಲಿರುವ ಆಪ್ತನ ಮನೆ ಹಾಗೂ ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಸ್ನೇಹಿತನ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಪುತ್ರರಾಗಿರುವ ವೈ ಮಂಜುನಾಥ ವಿರುದ್ಧ ಬೇನಾಮಿ ಹೆಸರಲ್ಲಿ ಜಮೀನು, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೂಲಕ ಅಕ್ರಮ ಆಸ್ತಿ ಸಂಪಾದನೆ ಆರೋಪ ಕೇಳಿಬಂದಿದೆ.
ಸದ್ಯ ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ ಇರುವ ವೈ ಮಂಜುನಾಥ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಇನ್ನೂ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರನ್ನು ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಸಮಿಟ್ ಅಪಾರ್ಟ್ಮೆಂಟ್‌ನಲ್ಲಿ ಇಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಳಗಾವಿ ಮತ್ತು ಬೆಂಗಳೂರು ಸೇರಿ ಮಂಜುನಾಥಗೆ ಸೇರಿದ ಮನೆಗಳು ಹಾಗೂ ಆಪ್ತರ ಆರು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬೆಳಗಾವಿಯ ಟಿವಿ ಸೆಂಟರ್‌ನಲ್ಲಿರುವ ನಿವಾಸದಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Total Views 241
RELATED ARTICLES

Most Popular

Recent Comments

KNN City News
Home
E-Paper