Thursday, November 19, 2026
HomeHubli-Dharwadಎಸ್‌ಐಆರ್ ಜನಜಾಗೃತಿ ಸಮಾವೇಶ – ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆಗೆ"

ಎಸ್‌ಐಆರ್ ಜನಜಾಗೃತಿ ಸಮಾವೇಶ – ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆಗೆ”

 

ಹುಬ್ಬಳ್ಳಿ, ಜೂ.25: ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೆಳಗಾವಿ ವಿಭಾಗ ಮಟ್ಟದ “ಎಸ್‌ಐಆರ್ (SIR) ಜನಜಾಗೃತಿ ಸಮಾವೇಶ – ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆಗೆ” ಕಾರ್ಯಕ್ರಮ ಇಂದು ಹುಬ್ಬಳ್ಳಿಯ ಬಾಬು ಜಗಜೀವನ್ ರಾಮ್ ಸಮದಾಬಾದ್ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವ ವಹಿಸಿದ್ದರು. ಮಾಧ್ಯಮ ಉದ್ದೇಶಿಸಿ ಮಾತನಾಡಿದ ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಗೌರಮ್ಮ ಬಲೋಗಿ ಕಾಂಗ್ರೆಸ್

ಮತದಾನದ ಹಕ್ಕು ಪ್ರಜಾಪ್ರಭುತ್ವದ ಆತ್ಮ ಆದರೆ ಎಸ್‌ಐಆರ್ ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅಪಾಯಕಾರಿ ಪ್ರಕ್ರಿಯೆ ನಡೆಯುತ್ತಿದೆ.

ದಾಖಲೆಗಳ ನೆಪದಲ್ಲಿ ಬಡವರು, ಶ್ರಮಿಕರು, ದಲಿತರು, ಆದಿವಾಸಿಗಳು, ಅಲೆಮಾರಿ ಹಾಗೂ ಅಂಚಿನ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ.

ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ. ಜನಜಾಗೃತಿಯ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು

Total Views 29
RELATED ARTICLES

Most Popular

Recent Comments

KNN City News
Home
E-Paper