
ಬೆಳಗಾವಿ
ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು. 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪರ್ಕಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶದಂತೆ, ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಸಂಚಾರ ಮಾಡದಂತೆ ಹಾಗೂ ನದಿ, ಹಳ್ಳ, ಜಲಪಾತಗಳ ಬಳಿ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದಾರೆ.
