Monday, November 23, 2026
HomeBelagaviನಾಳೆಯೂ ಈ‌ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಡಿಸಿ

ನಾಳೆಯೂ ಈ‌ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಡಿಸಿ

ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಖಾನಾಪುರ, ಬೆಳಗಾವಿ ಹಾಗೂ‌ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕನ್ನಡಮ್ಮಕ್ಕೆ ತಿಳಿಸಿದ್ದಾರೆ.

ವ್ಯಾಪಕವಾಗಿ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಬೆಳಗಾವಿ ತಾಲೂಕು ಹಾಗೂ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಮಳೆಯಾಗುವ ಪ್ರಮಾಣ ನೋಡಿಕೊಂಡು ಮುಂದಿ‌ನ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ನಿರ್ಧಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕನ್ನಡಮ್ಮಕ್ಕೆ ತಿಳಿಸಿದರು.

Total Views 621
RELATED ARTICLES

Most Popular

Recent Comments

KNN City News
Home
E-Paper