Monday, November 23, 2026
HomeBelagaviಅಪಾಯದ ಅಂಚಿನಲ್ಲಿದೆ ಪಾವರ್ತತಿ ನಗರದ ನಾಲೆ: ಜನರ ಆತಂಕ

ಅಪಾಯದ ಅಂಚಿನಲ್ಲಿದೆ ಪಾವರ್ತತಿ ನಗರದ ನಾಲೆ: ಜನರ ಆತಂಕ

 

ಬೆಳಗಾವಿ
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಪಾರ್ವತಿ ನಗರ ಕ್ರಾಸ್ ಸಮೀಪದ ಸಂಕಲ್ಪ ಭೂಮಿ ಬಳಿಯ ನಾಲೆ ಅಪಾಯಕಾರಿ ಸ್ಥಿತಿಗೆ ತಲುಪಿದ್ದು, ತಕ್ಷಣ ದುರಸ್ತಿ ನಡೆಸುವಂತೆ ಸ್ಥಳೀಯರು ಹಾಗೂ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯಿಸಿದೆ.
ಸುಮಾರು 15 ದಿನಗಳ ಹಿಂದೆ ಈ ರಸ್ತೆಗೆ ಡಾಂಬರೀಕರಣ ಕಾಮಗಾರಿ ನಡೆಸಲಾಗಿದ್ದರೂ, ರಸ್ತೆ ಪಕ್ಕದಲ್ಲಿರುವ ನಾಲೆಯ ಸಮಸ್ಯೆಯನ್ನು ಬಗೆಹರಿಸಲಾಗಿಲ್ಲ. ನಿರಂತರ ಮಳೆಯಿಂದ ನಾಳೆ ಉಕ್ಕಿ ಹರಿಯುತ್ತಿದ್ದು, ರಸ್ತೆ ದಾಟುವುದು ಸಾರ್ವಜನಿಕರಿಗೆ ಅಪಾಯಕಾರಿಯಾಗಿದೆ.
ಸಂಕಲ್ಪ ಭೂಮಿ ಸಮೀಪದ ಚೇತನ್ ಮಾಳೆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರ ಕುಟುಂಬಗಳು ವಾಸಿಸುತ್ತಿದ್ದು, ಅಲ್ಲಿನ ಪುಟ್ಟ ಮಕ್ಕಳು ಪ್ರತಿದಿನ ಸುಮಾರು ಎರಡು ಕಿಲೋಮೀಟರ್ ನಡೆದು ಇದೇ ರಸ್ತೆಯ ಮೂಲಕ ಶಾಲೆಗೆ ತೆರಳಬೇಕಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಾಯಕಾರಿ ನಾಲೆಯನ್ನು ತಕ್ಷಣ ದುರಸ್ತಿಪಡಿಸಿ ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಕುರಿತು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಮಧ್ಯಪ್ರವೇಶಿಸಿ, ಸಂಬಂಧಪಟ್ಟ ಕಾರ್ಪೊರೇಟರ್ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೂಲಕ ನಾಲೆ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಹಣಬರ ಮನವಿ ಮಾಡಿದ್ದಾರೆ.

Total Views 77
RELATED ARTICLES

Most Popular

Recent Comments

KNN City News
Home
E-Paper