Monday, November 23, 2026
HomeBelagaviಅತ್ಯಾಚಾರ ಮಾಡಿ ಮತಾಂತರಕ್ಕೆ ಯತ್ನಿಸಿದ ಅಪರಾಧಿಗೆ ಜೀವಾವಧಿ ಶಿಕ್ಷೆ

ಅತ್ಯಾಚಾರ ಮಾಡಿ ಮತಾಂತರಕ್ಕೆ ಯತ್ನಿಸಿದ ಅಪರಾಧಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ
ಪರಿಶಿಷ್ಟ ಜಾತಿಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಅಶ್ಲೀಲ ಫೋಟೋಗಳ ಮೂಲಕ ಬೆದರಿಕೆ ಹಾಕಿ ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಅಪರಾಧಿ ರಫೀಕ ಬೇಪಾರಿಗೆ ಬೆಳಗಾವಿಯ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಸವದತ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಪು ನೀಡಿತು. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯೊಂದಿಗೆ 1 ಲಕ್ಷ ದಂಡ, ಎಸ್‌ಸಿ, ಎಸ್‌ಟಿ ಕಾಯ್ದೆಯಡಿ 5 ವರ್ಷ ಕಠಿಣ ಕಾರಾಗೃಹ ಮತ್ತು 50 ಸಾವಿರ ದಂಡ, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳ ಸಂರಕ್ಷಣಾ ಕಾಯ್ದೆಯಡಿ 5 ವರ್ಷ ಕಠಿಣ ಕಾರಾಗೃಹ ಮತ್ತು 25 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆಗೆ 50 ಸಾವಿರ ಪರಿಹಾರ ನೀಡುವಂತೆಯೂ ಆದೇಶಿಸಲಾಗಿದೆ. ಸರಕಾರಿ ಅಭಿಯೋಜಕ ಆರ್.ಜಿ. ದೇವರಡ್ಡಿ ವಾದ ಮಂಡಿಸಿದರು.

Total Views 150
RELATED ARTICLES

Most Popular

Recent Comments

KNN City News
Home
E-Paper