
ಬೆಳಗಾವಿ
ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಮೂರು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿ ನಾಗೇಶ ತಳವಾರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರೇಮಾ ತಳವಾರ ಮೂರು ವರ್ಷದ ಪುತ್ರ ಭುವನ್ನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಮೃತೆಯ ಕುಟುಂಬಸ್ಥರ ದೂರಿನ ಮೇರೆಗೆ ಪತಿ ನಾಗೇಶ ತಳವಾರ, ಅತ್ತೆ ಸುಶೀಲಾ ತಳವಾರ, ಮೈದುನ ಹಾಗೂ ನಾದಿನಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿ ನಾಗೇಶ ತಳವಾರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನೂ ಪ್ರಕರಣದ ಇತರೆ ಆರೋಪಿಗಳಾದ ಅತ್ತೆ ಸುಶೀಲಾ ತಳವಾರ ಸೇರಿದಂತೆ ಉಳಿದವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
