Monday, November 23, 2026
HomeBelagaviಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿ ಆಗೋಲ್ಲ: ಸಚಿವ ಯತೀಂದ್ರ

ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿ ಆಗೋಲ್ಲ: ಸಚಿವ ಯತೀಂದ್ರ

ಬೆಳಗಾವಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು ಎಂದು ಹೇಳಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು, ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಅದನ್ನೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಅವರು ಖಂಡಿತವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.
ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಮುಖ್ಯಮಂತ್ರಿ ಅವರನ್ನು ದೆಹಲಿಗೆ ಕರೆದಿದೆ. ಚರ್ಚೆಯ ಬಳಿಕ ಸೂಕ್ತ ತೀರ್ಮಾನ ಕೈಗೊಂಡು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿರುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ನಗರಾಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದರು.
ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ವಿಶೇಷ ಅನುದಾನ ಸ್ಥಗಿತಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ, “ಈ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಪರಿಶೀಲಿಸಿ ಮಾಹಿತಿ ಪಡೆಯುತ್ತೇನೆ. ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲದ ಸ್ಥಳಗಳಲ್ಲಿಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುದಾನ ಬರುತ್ತದೆ ಎಂದು ಉತ್ತರಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಎಲ್‌ ಆಂಡ್‌ ಟಿ ಕಂಪನಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, “24×7 ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಡೆಯುತ್ತಿದೆ. ರಸ್ತೆಗಳನ್ನು ಎಲ್ಲಿ ಅಗೆದಿದ್ದಾರೋ, ಅವರೇ ಅವುಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಬೇಕು. ಈ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುತ್ತೇನೆ ಎಂದರು.
ಬೆಳಗಾವಿ ಜಿಲ್ಲೆಗೆ ವಿಶೇಷ ಯೋಜನೆಗಳ ಕುರಿತು ಮಾತನಾಡಿದ ಅವರು, “ಇಂದಿನ ಸಭೆಯಲ್ಲಿ ಜಿಲ್ಲೆಯ ಅಗತ್ಯಗಳನ್ನು ಪರಿಶೀಲಿಸುತ್ತೇನೆ. ಬೆಳಗಾವಿಗೆ ಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಗುರುತಿಸಿ ರಾಜ್ಯ ಸರ್ಕಾರದಿಂದ ಅಗತ್ಯ ನೆರವು ದೊರಕಿಸುವ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು.

Total Views 67
RELATED ARTICLES

Most Popular

Recent Comments

KNN City News
Home
E-Paper