
ಬೆಂಗಳೂರು
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದೇ ವೇಳೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟಿದೆ.
5 ಲಕ್ಷ ರೂ ಬಾಂಡ್ ಹಾಗೂ ಶ್ಯೂರಿಟಿ ಒದಗಿಸಬೇಕು, ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ನೀಡಿದೆ.
ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚನ್ನಕೇಶವ ಟಿಂಗರಿಕರ್‌ಗೂ ಜಾಮೀನು ದೊರೆತಿದೆ.
2016ರ ಜೂನ್‌ನಲ್ಲಿ ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆಯಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರ ಪರಿಣಾಮವಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದರು.
ಇದೀಗ ಹೈಕೋರ್ಟ್ ಶಿಕ್ಷೆ ಮತ್ತು ದೋಷಾರೋಪಣೆಯ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿರುವುದರಿಂದ, ವಿನಯ್ ಕುಲಕರ್ಣಿಗೆ ಅವರ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ಪೂರ್ಣಗೊಳ್ಳುವವರೆಗೆ ಮಧ್ಯಂತರ ಕಾನೂನು ಪರಿಹಾರ ದೊರೆತಿದೆ.
