Monday, November 23, 2026
HomeBelagaviಸಿಎಂ ಡಿಕೆಶಿ ಸಂಪುಟದಲ್ಲಿ ಸವದಿ ಸಾಹುಕಾರ್ ಗೆ ಸಚಿವ ಸ್ಥಾನ

ಸಿಎಂ ಡಿಕೆಶಿ ಸಂಪುಟದಲ್ಲಿ ಸವದಿ ಸಾಹುಕಾರ್ ಗೆ ಸಚಿವ ಸ್ಥಾನ

ಬೆಂಗಳೂರು
ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಹೈಕಮಾಂಡ್‌ನೊಂದಿಗೆ ನಡೆದ ಸರಣಿ ಸಭೆಗಳ ನಂತರ ನೂತನ ಸಚಿವರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ 13 ಸಚಿವರಿದ್ದು, ಇನ್ನುಳಿದ 20 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದೆ.
ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಹಳೆಯ ಮೈಸೂರು ಭಾಗ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕರಾವಳಿ ಭಾಗಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಹಿರಿಯ ಅನುಭವಿಗಳ ಜೊತೆಗೆ ಯುವ ಶಾಸಕರಿಗೂ ಅವಕಾಶ ಕಲ್ಪಿಸಲಾಗಿದೆ.
ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಾಗಿದ್ದು, ಕೆಲವು ಹಿರಿಯ ನಾಯಕರಿಗೆ ಮತ್ತೆ ಅವಕಾಶ ನೀಡಲಾಗಿದೆ. ಕೆಲವರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ಒಲಿದಿದೆ.

ಲಕ್ಷ್ಮಣ ಸವದಿ, ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವನ್ತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಝಡ್. ಝಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಎಚ್. ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ ಬಸವರಾಜ ರಾಯರೆಡ್ಡಿ, ಎಚ್‌. ಸಿ. ಬಾಲಕೃಷ್ಣ ಗಾಯತ್ರಿ ಶಾಂತೇಗೌಡ ಬಸವರಾಜ ರಾಯರೆಡ್ಡಿ,‌ವಿಜಯಾನಂದ ಕಾಶಪ್ಪನವ‌ರ್ ಗೆ ಸಚಿವ ಸ್ಥಾನ ಲಭಿಸಿದ್ದು, ಬಹುತೇಕ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 

Total Views 38
RELATED ARTICLES

Most Popular

Recent Comments

KNN City News
Home
E-Paper