
ಬೆಳಗಾವಿ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ಹಗ್ಗ ಜಗ್ಗಾಟ ನಡೆದಿದ್ದು, ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನದ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದ್ದು, ಕೊನೆಯ ಕ್ಷಣದಲ್ಲಿ ವಿಧಾನ ಪರಿಷತ್ತಿನ ಸದಸ್ಯೆ ಉಮಾಶ್ರೀ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ಪೈಕಿ ಒಬ್ಬರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದಾರೆ.
ಹೌದು. ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನವನ್ನೇ ಸ್ವೀಕರಿಸದ ಗಾಯತ್ರಿ ಶಾಂತೇಗೌಡ ಅವರ ಹೆಸರು ಸಚಿವ ಸಂಪುಟದ 20 ಜನರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿರುವುದಕ್ಕೆ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಜಾತಿವಾರು ವಿಧಾನ ಪರಿಷತ್ತಿನಲ್ಲಿ ಈಗಾಗಲೇ ವಿಧಾನ ಪರಿಷತ್ತಿನಿಂದ ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿದ್ದಾರೆ. ಈಗ ಅದೇ ಸಮುದಾಯದ ಗಾಯತ್ರಿ ಶಾಂತೇಗೌಡ ಅವರ ಹೆಸರು ಸೇರ್ಪಡೆಯಾಗಿದೆ. ಅವರು ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಿಲ್ಲ. ಅವರಿಗೆ ಹೇಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಬರುವುದಿಲ್ಲ ಎನ್ನುವ ಮಾತು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.
ಇಂದು ಹೈಕಮಾಂಡ್ 20 ಹೆಸರಿನ ಪಟ್ಟಿಯಲ್ಲಿ ಮಂಕಾಳು ವೈದ್ಯರ ಹೆಸರು ಇತ್ತು. ಏಕಾಏಕಿ ಅವರ ಹೆಸರು ತೆಗೆದು ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನದ ಎರಡನೇ ಪಟ್ಟಿಯಲ್ಲಿ ಸೇರ್ಪಡೆ ಮಾಡಿದರು. ಈಗ ಗಾಯತ್ರಿ ಶಾಂತೇಗೌಡ ಅವರ ಹೆಸರು ಬದಲಾಗಿ ಉಮಾಶ್ರೀ ಅಥವಾ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದರೂ ಅಚ್ಚರಿ ಪಡಬೇಕಿಲ್ಲ.
ಈಗಾಗಲೇ ಉಮಾಶ್ರೀ ಅವರಿಗೆ ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಹೆಸರು ಸೇರಿಸಲಾಗಿದೆ. ಮಹಿಳಾ ಕೋಟಾದಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತೀವ್ರ ಲಾಬಿ ನಡೆಸಿದ್ದು, ಗಾಯತ್ರಿ ಶಾಂತೇಗೌಡ ಬದಲು ಅವರು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೂ ಅಶ್ಚರಿಪಡಬೇಕಿಲ್ಲ.
