
ಬೆಳಗಾವಿ
ಸಾರ್ವಜನಿಕರಿಗೆ ಬೇದರಿಕೆ, ದಬ್ಬಾಳಿಕೆ ಮಾಡಿ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಶಿವಾನಂದ ಕೋಲಕಾರನನ್ನು ಬೈಲಹೊಂಗಲ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸರಕಾರಿ ಅಧಿಕಾರಿಗಳಿಗೆ ಸುಳ್ಳು ಜಾತಿ ನಿಂಧನೆ ಪ್ರಕರಣ ದಾಖಲಿಸುವ ಬೇದರಿಕೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದ್ದು, ರೌಡಿಶೀಟರ್ ಆಗಿ ಗುರುತಿಸಲ್ಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಾರಂಟ್ ಜಾರಿಗೊಳಿಸುವ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬೈಲಹೊಂಗಲ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
