Monday, November 23, 2026
HomeBelagaviಮಹಿಳಾ ಪಿಎಸ್ಐ ಮಸಾಲಾ ವಿಡಿಯೋಗೆ ಹಿಂಡಲಗಾ ಜೈಲು ಲಿಂಕ್

ಮಹಿಳಾ ಪಿಎಸ್ಐ ಮಸಾಲಾ ವಿಡಿಯೋಗೆ ಹಿಂಡಲಗಾ ಜೈಲು ಲಿಂಕ್

ಬೆಳಗಾವಿ
ಮಹಿಳಾ ಪಿಎಸ್ಐಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಘನತೆಗೆ ಧಕ್ಕೆ ತಂದ ಆರೋಪದವರೆಗೆ ತಲುಪಿದೆ. ಜೈಲಿನ ಕುರಿತು ಅವಹೇಳನಕಾರಿ ಮಾಹಿತಿ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಡಲಗಾ ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕರು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಹಿಂಡಲಗಾ ಜೈಲಿನ ಘನತೆಗೆ ಚ್ಯುತಿ ತಂದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ಸಂಧ್ಯಾ ನಾಗರಾಜ್ ಸೇರಿದಂತೆ ಕೆಲವರ ವಿರುದ್ಧ ಖಾಸಗಿ ದೂರು ದಾಖಲಿಸಲಾಗಿದೆ. ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಮಹಾಂತೇಶ ಅವರ ಮೂಲಕ ಖಾಸಗಿ ದೂರು ಸಲ್ಲಿಸಲಾಗಿದೆ.
ಇತ್ತೀಚೆಗೆ ಖಾಸಗಿ ವ್ಯಕ್ತಿಯೊಬ್ಬರಿಗೆ ಬೆತ್ತಲಾಗಿ ವಿಡಿಯೋ ಕಾಲ್ ಮಾಡಿದ್ದ ಕೆಐಎಸ್‌ಎಫ್‌ನ ಮಹಿಳಾ ಪಿಎಸ್ಐಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ವಿಡಿಯೋವನ್ನು ‘Sandhya777nagraj’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ವಿಡಿಯೋ ಪೋಸ್ಟ್‌ನಲ್ಲಿ ಮಹಿಳಾ ಪಿಎಸ್ಐ ಬೆತ್ತಲಾಗಿ ವಿಡಿಯೋ ಕಾಲ್ ಮಾಡಿರುವುದು ಹಿಂಡಲಗಾ ಜೈಲಿನಲ್ಲೇ ನಡೆದಿದೆ ಎಂಬ ರೀತಿಯಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾರಾಗೃಹ ಸುಧಾರಣೆ ಇಲಾಖೆಯ ಎಡಿಜಿಪಿ ಅವರ ಭಾವಚಿತ್ರಗಳನ್ನು ಬಳಸಿಕೊಂಡು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆದರೆ, ಮಹಿಳಾ ಪಿಎಸ್ಐಗೂ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜೈಲಿನ ಹೆಸರನ್ನು ಬಳಸಿಕೊಂಡು ಅಶ್ಲೀಲ ವಿಡಿಯೋ ಹರಿಬಿಟ್ಟು ಕಾರಾಗೃಹದ ಘನತೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ.
ಈ ಹಿಂದೆ ಹಿಂಡಲಗಾ ಜೈಲಿನಲ್ಲಿದ್ದ ತುಮಕೂರು ಮೂಲದ ಕೈದಿ ಸಾಯಿಕುಮಾರ್ ವಿರುದ್ಧವೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಜೈಲಿನ ಬಗ್ಗೆ ಸುಳ್ಳು ಹಾಗೂ ಅವಹೇಳನಕಾರಿ ಮಾಹಿತಿ ಪ್ರಸಾರ ಮಾಡಿದ ಆರೋಪಿಗಳ ವಿರುದ್ಧ ಬಿಎನ್‌ಎಸ್ 356(2) ಮತ್ತು 356(3) ಅಡಿ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.

Total Views 456
RELATED ARTICLES

Most Popular

Recent Comments

KNN City News
Home
E-Paper