
ಬೆಳಗಾವಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಆಸೀಫ್ ಸೇಠ್ ಅವರಿಗೆ ಸರ್ಕಾರ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧ್ಯಕ್ಷ ಸ್ಥಾನ ನೀಡಿದೆ.
ಈವರೆಗೆ ಬುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಣರಾವ್ ಚಿಂಗಳ ಅವರ ಬದಲಿಗೆ ಶಾಸಕ ಆಸೀಫ್ ಸೇಠ್ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ಹೊರಡಿಸಿದ್ದಾರೆ.
