Monday, November 23, 2026
HomeBelagaviಗಣೇಶೋತ್ಸವ ಸಂಭ್ರಮದಲ್ಲಿದ್ದ ಮನೆಯಲ್ಲಿ ಆಘಾತ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವ ಸಂಭ್ರಮದಲ್ಲಿದ್ದ ಮನೆಯಲ್ಲಿ ಆಘಾತ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಬೆಳಗಾವಿ
ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ.
ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು.
ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Total Views 656
RELATED ARTICLES

Most Popular

Recent Comments

KNN City News
Home
E-Paper