
ಬೆಳಗಾವಿ
ಗಣೇಶ ಮೂರ್ತಿ ಮೆರವಣಿಗೆ ವೇಳೆ ಉಂಟಾದ ಮಾತಿನ ಚಕಮಕಿ ಬಳಿಕ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ಹುಕ್ಕೇರಿ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಗಣೇಶ ಮೂರ್ತಿಯನ್ನು ತರುವ ಸಂದರ್ಭದಲ್ಲಿ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಿಸ್ಥಿತಿ ಗಂಭೀರಗೊಂಡು ಪರಸ್ಪರ ಹೊಡೆದಾಟ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಗಲಾಟೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮಾಹಿತಿ ಕಲೆಹಾಕಿ ತನಿಖೆ ನಡೆಸುತ್ತಿದ್ದಾರೆ.
