Monday, November 23, 2026
HomeBelagaviಸರಕಾರಿ ಬಸ್ ಗಳ ನಡುವೆ ಭೀಕರ ರಸ್ತೆ ಅಪಘಾತ

ಸರಕಾರಿ ಬಸ್ ಗಳ ನಡುವೆ ಭೀಕರ ರಸ್ತೆ ಅಪಘಾತ

ಬೆಳಗಾವಿ
ಎರಡು ಸರಕಾರಿ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ನಗರದಲ್ಲಿ ನಡೆದಿದೆ.
ಬೈಲಹೊಂಗಲದಿಂದ ಬೇವಿನಕೊಪ್ಪದ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ, ಮುಂದೆ ಸಾಗುತ್ತಿದ್ದ ಮತ್ತೊಂದು ಸರಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಬೈಲಹೊಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Total Views 93
RELATED ARTICLES

Most Popular

Recent Comments

KNN City News
Home
E-Paper