
ಬೆಳಗಾವಿ
ವಂದೇ ಮಾತರಂ ಗೀತೆಯ ವಿಚಾರದಲ್ಲಿ ರಾಜ್ಯ ಸರಕಾರದ ನಿರ್ಧಾರಕ್ಕೆ ರಾಜ್ಯಪಾಲರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರ ಸೂಚನೆಯಂತೆ ವಂದೇ ಮಾತರಂ ಗೀತೆಯ ಪೂರ್ಣ ಚರಣವನ್ನು ಹಾಡಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ 26ನೇ ಘಟಿಕೋತ್ಸವದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ ಹಾಗೂ ಸಚಿವ ಬಸವರಾಜ ರಾಯರೆಡ್ಡಿ ಸೇರಿದಂತೆ ಗಣ್ಯರ ಸಮ್ಮುಖದಲ್ಲೇ ವಂದೇ ಮಾತರಂನ ಪೂರ್ಣ ಚರಣ ಮೊಳಗಿತು.
ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸುವ ಕುರಿತು ಸರಕಾರ ಕೈಗೊಂಡಿದ್ದ ನಿರ್ಧಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಕ್ಷೇಪ ವ್ಯಕ್ತಪಡಿಸಿ ಸರಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ, ರಾಜ್ಯಪಾಲರ ಸೂಚನೆಯಂತೆ ವಿಟಿಯು ಘಟಿಕೋತ್ಸವದಲ್ಲಿ ಪೂರ್ಣ ಚರಣ ಹಾಡಿಸಿರುವುದು ಗಮನ ಸೆಳೆಯಿತು.
