Monday, November 23, 2026
HomeBelagaviಎಸ್ಐಆರ್ ಅಕ್ರಮ ಆರೋಪ: ಶಾಸಕ ಅಭಯ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಎಸ್ಐಆರ್ ಅಕ್ರಮ ಆರೋಪ: ಶಾಸಕ ಅಭಯ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಬೆಳಗಾವಿ
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ 2,598 ಮತದಾರರನ್ನು ನಕಲಿ ಮತದಾರರೆಂದು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿರುವ ಶಾಸಕ ಅಭಯ ಪಾಟೀಲ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಹಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ದೂರು ಸಲ್ಲಿಸಿದರು.
ಶಾಸಕ ಅಭಯ ಪಾಟೀಲ ಅವರು ಕಳೆದ ಸೆ.19 ರಂದು ಪತ್ರ ಸಂಖ್ಯೆ ಶಾಸಕರು/ಬೆಳಗಾವಿ (ದಕ್ಷಿಣ)/-113-/2025/(ಬೆಳಗಾವಿ) ಮೂಲಕ 2,598 ಮತದಾರರ ಹೆಸರುಗಳನ್ನು ಪರಿಶೀಲಿಸಿ, ನಕಲಿ ಎಂದು ಕಂಡುಬಂದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೆ, ಮತದಾರರ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ನಮೂನೆ-7 ಅನ್ನು ದುರುಪಯೋಗಪಡಿಸಿಕೊಂಡು, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಪಾಲಿಕೆ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿರುವ ಆರೋಪವನ್ನೂ ಮಾಡಿದ್ದಾರೆ. ಈ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ನಡೆಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದರ ಜತೆಗೆ, 2,598 ಮತದಾರರನ್ನು ಬಾಂಗ್ಲಾದೇಶ, ಪಾಕಿಸ್ತಾನ ಅಥವಾ ರೋಹಿಂಗ್ಯಾ ಮೂಲದವರೆಂದು ಬಿಂಬಿಸಿ ಅವರ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ದೂರಿದ್ದಾರೆ. ಇಂತಹ ಹೇಳಿಕೆಗಳಿಂದ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಉಂಟಾಗುವುದಲ್ಲದೆ, ನಿರ್ದಿಷ್ಟ ಸಮುದಾಯದ ಮತದಾನದ ಹಕ್ಕಿಗೆ ಧಕ್ಕೆಯಾಗುವ ಅಪಾಯವಿದೆ ಎಂದು ದೂರಿನಲ್ಲಿ‌ ತಿಳಿಸಿದ್ದಾರೆ.
ಶಾಸಕ ಅಭಯ ಪಾಟೀಲ ಬರೆದಿರುವ ಪತ್ರ ಹಾಗೂ ಮತದಾರರ ಹೆಸರುಗಳನ್ನು ತೆಗೆದುಹಾಕಲು ಸಲ್ಲಿಸಿರುವ ಮನವಿಯ ಕುರಿತು ಸಮಗ್ರ ತನಿಖೆ ನಡೆಸಬೇಕು. ಭಾರತೀಯ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ರಕ್ಷಿಸಬೇಕು. ದೂರಿನಲ್ಲಿ ಉಲ್ಲೇಖಿಸಿರುವ ಭಾರತೀಯ ಕಾನೂನಿನ ಸೆಕ್ಷನ್ 31ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜಾಸಲೀಂ ಕಾಶಿಮನವರ, ಕಾಂಗ್ರೆಸ್ ಮುಖಂಡರಾದ ಪ್ರದೀಪ್‌ ಎಂ.ಜೆ. ಅನಂತ ಬ್ಯಾಕೂಡ್, ಮಂಜುನಾಥ, ಪ್ರಭಾವತಿ ಚಾವಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Total Views 138
RELATED ARTICLES

Most Popular

Recent Comments

KNN City News
Home
E-Paper