Thursday, November 19, 2026
HomeBelagaviಕಿತ್ತೂರು ಉತ್ಸವದ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ

ಕಿತ್ತೂರು ಉತ್ಸವದ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ

ಬೆಳಗಾವಿ
ಕಿತ್ತೂರು ಉತ್ಸವದ ಸಂದರ್ಭದಲ್ಲೇ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಮೂರ್ತಿಗೆ ಹಾನಿಯಾಗಿರುವ ಘಟನೆ ನಡೆದಿದ್ದು, ಮೂರ್ತಿಯ ಖಡ್ಗ ಹಿಡಿದಿದ್ದ ಬಲಗೈ ತುಂಡಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೂರ್ತಿಯ ಸಮೀಪ ಲಿಫ್ಟ್‌ ಬಳಸಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಕೂಲಿ ಕಾರ್ಮಿಕರ ಅಚಾತುರ್ಯದಿಂದ ಕೈಗೆ ಹಾನಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ತಾಲೂಕು ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಮೂರ್ತಿಯನ್ನು ಕೇಸರಿ ಬಟ್ಟೆಯಿಂದ ಮುಚ್ಚಿದೆ. ಬೈಲಹೊಂಗಲ ಡಿವೈಎಸ್ಪಿ ವೀರಯ್ಯ ಹಿರೇಮಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Total Views 111
RELATED ARTICLES

Most Popular

Recent Comments

KNN City News
Home
E-Paper