Thursday, November 19, 2026
HomeBelagaviಕಬ್ಬಿನ ದರದ ವಿಚಾರಕ್ಕೆ ಕಾರ್ಖಾನೆ ಹಾಗೂ ರೈತರ ನಡುವೆ ತುಂಬಾ ವ್ಯತ್ಯಾಸ ಇದೆ: ಸಚಿವ ಸತೀಶ್

ಕಬ್ಬಿನ ದರದ ವಿಚಾರಕ್ಕೆ ಕಾರ್ಖಾನೆ ಹಾಗೂ ರೈತರ ನಡುವೆ ತುಂಬಾ ವ್ಯತ್ಯಾಸ ಇದೆ: ಸಚಿವ ಸತೀಶ್

ಬೆಳಗಾವಿ
ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ದರ ನಿಗದಿ ಗೊಂದಲಕ್ಕೆ ಬುಧವಾರ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಮಂಗಳವಾರ ಬೆಳಗಾವಿ ಜಿಪಂ ಸಭಾಂಗಣ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆಯವರ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರೈತರು ಹಾಗೂ ಕಾರ್ಖಾನೆಯ ಕಡೆಯ ಬೇಡಿಕೆಗಳಲ್ಲಿ ವ್ಯತ್ಯಾಸವಿದ್ದು, ಒಮ್ಮತ ಮೂಡಿಸಲು ಪ್ರಯತ್ನಿಸಲಾಗುತ್ತಿದೆ. ಅಗತ್ಯವಿದ್ದರೆ ಬುಧವಾರ ಮತ್ತೊಮ್ಮೆ ಕಾರ್ಖಾನೆ ಮಾಲೀಕರ ಸಭೆ ನಡೆಸಲಾಗುವುದು. ದರ ನಿಗದಿ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಲಾಗುವುದು ಎಂದರು.
ಸಕ್ಕರೆ ಬೆಲೆಯಲ್ಲಿ ಏರಿಳಿತವಾಗುತ್ತಿರುವುದರಿಂದ ಕಾರ್ಖಾನೆಗಳಿಗೂ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವಂತೆ ಸರ್ಕಾರ ಒತ್ತಾಯಿಸಿದೆ. ಎಂಎಸ್‌ಪಿ ನಿಗದಿಯಾದರೆ ಕಾರ್ಖಾನೆಗಳಿಗೆ ಭದ್ರತೆ ದೊರೆಯಲಿದೆ ಎಂದು ತಿಳಿಸಿದರು.
ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವಿನ ದರದ ಅಂತರವನ್ನು ಕಡಿಮೆ ಮಾಡಿ, ಇಬ್ಬರಿಗೂ ಒಪ್ಪಿಗೆಯಾಗುವ ದರ ನಿಗದಿಪಡಿಸುವುದು ಸರ್ಕಾರದ ಆದ್ಯತೆಯಾಗಿದೆ. ಬುಧವಾರ ಸಮಸ್ಯೆಗೆ ಅಂತಿಮ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

Total Views 48
RELATED ARTICLES

Most Popular

Recent Comments

KNN City News
Home
E-Paper