Thursday, November 19, 2026
HomeBelagaviಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗನನ್ನೇ ಕೊಲೆ ಮಾಡಿಸಿದ ತಾಯಿ

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗನನ್ನೇ ಕೊಲೆ ಮಾಡಿಸಿದ ತಾಯಿ

 

ಬೆಳಗಾವಿ
ಅನೈತಿಕ ಸಂಬಂಧವನ್ನು ಪ್ರಶ್ನಿಸುತ್ತಿದ್ದ ಸ್ವಂತ ಮಗನನ್ನೇ ಕೊಲೆ ಮಾಡಿಸಲು ಸಂಚು ರೂಪಿಸಿದ ಬೆಂಗಳೂರು ಮೂಲದ ತಾಯಿ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಓರ್ವ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ನ.3ರಂದು ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕೆಎಲ್‌ಇ ಛತ್ರಿ ಸಮೀಪದ ಗಟಾರದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ನ.4ರಂದು ಬೆಂಗಳೂರು ಆರ್.ಟಿ. ನಗರದ ಮೀನಾ ನಾರಾಯಣ (44) ಎಂಬಾಕೆ ಮೃತದೇಹವನ್ನು ತನ್ನ ಮಗ ವಿಜಯ ನಾರಾಯಣ (24) ಎಂದು ಗುರುತಿಸಿದ್ದರು.
ಪೊಲೀಸರ ತನಿಖೆಯಲ್ಲಿ ಮೃತ ವಿಜಯನ ತಾಯಿ ಮೀನಾ, ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ರಾಕೇಶ ಪರಶುರಾಮ ಜಾಮೂನಿ (34) ಎಂಬಾತನೊಂದಿಗೆ ಸೇರಿ ಮಗನ ಕೊಲೆಗೆ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ. ಅದರಂತೆ ರಾಕೇಶ ತನ್ನ ಸಹಚರರೊಂದಿಗೆ ಸೇರಿ ವಿಜಯನಿಗೆ ನಿದ್ದೆ ಮಾತ್ರೆ ಬೆರೆಸಿದ ತಂಪು ಪಾನೀಯ ಕುಡಿಸಿ ಪ್ರಜ್ಞೆ ತಪ್ಪಿಸಿ, ಬಳಿಕ ಕಾರಿನಲ್ಲಿಯೇ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ನಂತರ ಶವವನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಟಾರದಲ್ಲಿ ಎಸೆದು ಆರೋಪಿಗಳು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ ಜಾಮೂನಿ, ಮೀನಾ ನಾರಾಯಣ, ಸಚಿನ ಕಾಂಬಳೆ, ಮನೋಜ ಕಾಂಬಳೆ, ತಮ್ಮಣ್ಣ ಕಾಂಬಳೆ ಹಾಗೂ ಏಕನಾಥ ಕಾಂಬಳೆ ಎಂಬ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ ಓರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊಬ್ಬ ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂದು ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಸುದ್ದಿಗಾರರಿಗೆ ತಿಳಿಸಿದರು. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Total Views 161
RELATED ARTICLES

Most Popular

Recent Comments

KNN City News
Home
E-Paper