
ಬೆಳಗಾವಿ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ವೈ.ಆರ್. ಪಾಟೀಲ ಶುಕ್ರವಾರ ನಿಧನರಾಗಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಮಲ್ಲಾಪುರ ಗ್ರಾಮದವರಾದ ವೈ.ಆರ್. ಪಾಟೀಲ ಅವರು ಕರ್ನಾಟಕ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಮಹಾ ನಿರೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ತಮ್ಮ ವೃತ್ತಿಜೀವನದಲ್ಲಿ ತುಮಕೂರು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಪೂರ್ವ ವಲಯ ಹಾಗೂ ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದ ಅವರು, ಕರ್ನಾಟಕ ಜಲ ನಿಗಮ ಹಾಗೂ ವಿದ್ಯುತ್ ನಿಗಮದ ವಿಚಕ್ಷಣ ದಳದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಪೊಲೀಸ್ ಇಲಾಖೆಯಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಳಗ ಅಗಲಿದ್ದಾರೆ.
