Monday, November 23, 2026
HomeKoppalರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರ ಏಳ್ಗೆ ಗೆ  ಸಾಧ್ಯವಾಗಿದೆ:  ರೆಡ್ಡಿ ಶ್ರೀನಿವಾಸ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರ ಏಳ್ಗೆ ಗೆ  ಸಾಧ್ಯವಾಗಿದೆ:  ರೆಡ್ಡಿ ಶ್ರೀನಿವಾಸ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

ಕನ್ನಡಮ್ಮ ಸುದ್ದಿ-ಕೊಪ್ಪಳ:  ರಾಜ್ಯ ಸರ್ಕಾರವು ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿದಿ, ಈ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ  ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿ ಅವರ ಏಳ್ಗೆಗಾಗಿ ಕಾರಣವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.           ಜಿಲ್ಲಾ ಪಂಚಾಯತ್ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನಪರವಾದ ಈ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಇವುಗಳ ಲಾಭವನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿ ತಿಂಗಳು ನಡೆಯುವ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆಯ ನಡುವಳಿಗಳನ್ನು ಆಯಾ ತಿಂಗಳ 15ನೇ ತಾರೀಖಿನೊಳಗೆ ಜಿಲ್ಲಾ ಸಮಿತಿಗೆ ಸಲ್ಲಿಸಿಬೇಕು. ಇದರಿಂದ ಜಿಲ್ಲಾ ಮಟ್ಟದಲ್ಲಿ ಚರ್ಚೆ ಮಾಡಲು ಅವಶ್ಯಕವಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲು ಅನುಕೂಲವಾಗುತ್ತದೆ ಎಂದು ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರುಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ ಖಾದ್ರಿ, ಅಮರೇಶಪ್ಪ ಎಸ್.ಜಿ., ನಾಗರಜ ಅರಳಿ ಹಾಗೂ ಖಾಸಿಂ ಸಾಬ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾ ನಿರ್ದೇಶಕ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಉದ್ಯೋಗ್ಯ ವಿನಿಮತ ಅಧಿಕಾರಿ ಪ್ರಾಣೇಶ್, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರುಶುರಾಮ ವೈ.ಎಸ್., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ತಾಲ್ಲೂಕಾ ಅಧ್ಯಕ್ಷರು ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

== ಪಂಚ ಗ್ಯಾರೆಂಟಿ ಯೋಜನೆಗಳ ಸಾಧನೆ *ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,21,494 ಜನ ಮನೆ ಯಜಮಾನಿಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್–2023 ರಿಂದ ಆಗಸ್ಟ್-2024 ರವರೆಗೆ ಡಿ.ಬಿ.ಟಿ. ಮೂಲಕ ಒಟ್ಟು 779 ಕೋಟಿ 35 ಲಕ್ಷ 72 ಸಾವಿರ ರೂ.ಗಳನ್ನು ಪಾವತಿಸಲಾಗಿದೆ.  *ಗೃಹ ಜ್ಯೋತಿ: ಯೋಜನೆಯಡಿ ಒಟ್ಟು 2,75,487 ಫಲಾನುಭವಿಗಳು ನೋಂದಣಿಯಾಗಿದ್ದು,  ಆಗಸ್ಟ್-2023 ರಿಂದ ಅಕ್ಟೋಬರ್-2024ರ ಅಂತ್ಯಕ್ಕೆ ಸಬ್ಸಿಡಿ ಮೂಲಕ ಒಟ್ಟು 162.3 ಕೋಟಿ ರೂ.ಗಳನ್ನು ಈ ಯೋಜನೆಗೆ ಪಾವತಿಸಿ, ಶೇ 97.10ರಷ್ಟು ಪ್ರಗತಿ ಜಿಲ್ಲೆಯಲ್ಲಿ ಸಾಧಿಸಲಾಗಿದೆ.

*ಯುವನಿಧಿ: ಯೋಜನೆಯಡಿ ಡಿಸೆಂಬರ್-2023 ರಿಂದ ಇಲ್ಲಿಯವರೆಗೆ 14,265 ಪದವಿಧರರಿಗೆ ತಿಂಗಳಿಗೆ ರೂ. 3,000 ರಂತೆ ಹಾಗೂ 182 ಡಿಪ್ಲೋಮಾ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,500 ರಂತೆ ಒಟ್ಟು 14,447 ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ವರ್ಗಾಯಿಸಲಾಗಿದ್ದು, ಇದಕ್ಕಾಗಿ ಒಟ್ಟು ಮೊತ್ತ 4.30 ಕೋಟಿ ರೂ.ಗಳನ್ನು ಪಾವತಿಸಲಾಗಿದೆ.  *ಅನ್ನಭಾಗ್ಯ: ಯೋಜನೆಯಡಿ ಒಟ್ಟು 3,22,209 ಪಡಿತರ ಚೀಟಿಗಳ ಪೈಕಿ ಆಗಸ್ಟ್-2024ರ ಮಾಹೆಗೆ 2,94,969 ಪಡಿತರ ಚೀಟಿಗಳಿಗೆ 17.98 ಕೋಟಿ ರೂ.ಗಳನ್ನು ಪಾವತಿಸಲು ಕ್ರಮವಹಿಸಲಾಗಿದೆ. ಇದರಲ್ಲಿ 2,35,108 ಪಡಿತರ ಚೀಟಿಗಳಿಗೆ ಈಗಾಗಲೇ ಡಿಬಿಟಿ ಮೊತ್ತವನ್ನು ಪಾವತಿಸಲಾಗಿದೆ ಹಾಗೂ ಉಳಿದ 59,861 ಚೀಟಿಗಳಿಗೆ 3.64 ಕೋಟಿ ರೂ. ಪಾವತಿ ಕಾರ್ಯ ಪ್ರಗತಿಯಲ್ಲಿದೆ. *ಶಕ್ತಿ ಯೋಜನೆ: ಶಕ್ತಿ ಯೋಜನೆಯಡಿ 5.45 ಕೋಟಿ ಮಹಿಳಾ ಪ್ರಯಾಣಿಕರು ಜೂನ್-2023 ರಿಂದ ಅಕ್ಟೋಬರ್-2024 ರವರೆಗೆ ಉಚಿತವಾಗಿ ಪ್ರಯಾಣಿಸಿದ್ದಾರೆ           ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡಲು ಆಯಾ ತಾಲೂಕಿನ ಸಿ.ಡಿ.ಪಿ.ಓಗಳು  ಕ್ರಮ ವಹಿಸಲು, ಬಸ್ ವ್ಯವಸ್ಥೆಗಳ ಸರಿಯಾಗಿ ನಿರ್ವಹಣೆ ಮತ್ತು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಸೂಕ್ತ ಕ್ರಮ ವಹಿಸಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. : ರೆಡ್ಡಿ ಶ್ರೀನಿವಾಸ, ಅಧ್ಯಕ್ಷರು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕೊಪ್ಪಳ.

Total Views 120
RELATED ARTICLES

Most Popular

Recent Comments

KNN City News
Home
E-Paper