Monday, November 23, 2026
HomeKoppalಪರಿಸರಕ್ಕೆ ಹಾನಿ, ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಪ್ಲಾಸ್ಟಿಕ್ ಬಳಕೆ ನಿಷೇಧ : ಮುಖ್ಯಾಧಿಕಾರಿ ನಾಗೇಶ್*

ಪರಿಸರಕ್ಕೆ ಹಾನಿ, ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಪ್ಲಾಸ್ಟಿಕ್ ಬಳಕೆ ನಿಷೇಧ : ಮುಖ್ಯಾಧಿಕಾರಿ ನಾಗೇಶ್*

* ಯಲಬುರ್ಗಾ ಪಟ್ಟಣದ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆಗೆ   ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡದಿರಲು  ಮನವಿ

ಕನ್ನಡಮ್ಮ ಸುದ್ದಿ-ಯಲಬುರ್ಗಾ:
ಸರ್ಕಾರದ ಅಧಿಸೂಚನೆ ದಿನಾಂಕದಿಂದ ಅನ್ವಯವಾಗುವಂತೆ ಯಲಬುರ್ಗಾ
ಪಟ್ಟಣದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವುಂತೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನಾಗೇಶ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಸಾರ್ವಜನಿಕ ಪ್ರಕಟನೆ ನೀಡಿರುವ  ಅವರು, ಪ್ಲಾಸ್ಟಿಕ್ ಬಳಕೆ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪ್ಲಾಸ್ಟಿಕ್ ಬಳಕೆ ನಿಷೇದದ ಕುರಿತು ಕ್ರಮವಹಿಸಲು ನಿರ್ದೇಶನ ನೀಡಿದ್ದು,  ಸರ್ಕಾರದ ಅಧಿಸೂಚನೆ ಸಂ:ಅಪಜೀ/17/ಇಪಿಸಿ/2012/ಬೆಂಗಳೂರು/ದಿನಾಂಕ:11.03-2016ರ ಪ್ರಕಾರ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಪರಿಸರ ಸಂರಕ್ಷಣೆಗೆ ಸಹಕರಿಸಲು ಕೋರಿರುವರು.
ಸರ್ಕಾರದ ಅಧಿಸೂಚನೆ ದಿನಾಂಕದಿಂದ ಅನ್ವಯವಾಗುವಂತೆ ಪರಿಸರ (ಸಂರಕ್ಷಣೆ) ಕಾಯಿದೆ 1986ರ ಸೆಕ್ಷನ್ 5ರಲ್ಲಿನ ಅಧಿಕಾರವನ್ನು ಚಲಾಯಿಸಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಡ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ನಿಂದ ತಯಾರಾದಂತಹ ಮೇಲ್ಕಂಡ ವಸ್ತುಗಳ ತಯಾರಿಕೆ. ಸರಬರಾಜು ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿಲಾಗಿದೆ ಎಂದು ತಿಳಿಸಿದ್ದಾರೆ.

*ಪ್ಲಾಸ್ಟಿಕ್ ಕ್ಯಾರಿಬ್ಯಾಗ್ಗಳು ಹಾಗೂ ದೈನಂದಿನ ಬಳೆಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ಧೀರ್ಘಾವಧಿಯಲ್ಲಿ ಉಂಟುಮಾಡಲು ಕಾರಣವಾಗಿರುತ್ತದೆ,  ಈ ವಸ್ತುಗಳ ತಯಾರಿಕೆ. ಸರಬರಾಜು ಮತ್ತು ಬಳಕೆ ಕಂಡುಬಂದಲ್ಲಿ ಜಪ್ತಿ ಮಾಡಿ ಅಂಥವರ ವಿರುದ್ಧ ಪರಿಸರ(ಸಂರಕ್ಷಣೆ) ಕಾಯಿದೆ 1986ರ ಸೆಕ್ಷನ್ 19ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಈ ಅಧಿಸೂಚನೆಯನ್ನು ಉಲ್ಲಂಘಿಸಿದವರ ಮೇಲೆ ಕಾನೂನು ರೀತ್ಯ ಶಿಸ್ತು ಕ್ರಮ ಜರುಗಿಸಲಾಗುತ್ತದೆ : ನಾಗೇಶ್, ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ ಯಲಬುರ್ಗಾ.*

Total Views 83
RELATED ARTICLES

Most Popular

Recent Comments

KNN City News
Home
E-Paper