Monday, November 23, 2026
HomeKoppalಮಕ್ಕಳ ಹಕ್ಕುಗಳ, ಮಕ್ಕಳ ಪರವಾದ ಕಾನೂನುಗಳು, ದತ್ತು ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಜಾಗೃತಿ

ಮಕ್ಕಳ ಹಕ್ಕುಗಳ, ಮಕ್ಕಳ ಪರವಾದ ಕಾನೂನುಗಳು, ದತ್ತು ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಜಾಗೃತಿ

ಕನ್ನಡಮ್ಮ ಸುದ್ದಿ-ಕೊಪ್ಪಳ: ಸಂವಿಧಾನವು “ಮಹಿಳೆ ಮತ್ತು ಮಕ್ಕಳಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಲು” ನೀಡಿರುವ ಅವಕಾಶಗಳನ್ವಯ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಇನ್ನೂ ಮುಂತಾದ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂದು  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು.

ಗಂಗಾವತಿ ತಾಲೂಕಿನ ಶ್ರೀ ಸಿರಿಗೇರಿ ಡಿ. ವೆಂಕೋಬ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜನಲ್ಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಪರವಾದ ಕಾನೂನುಗಳು ಹಾಗೂ ದತ್ತು ಕಾರ್ಯಕ್ರಮದ ಕುರಿತು ಜರುಗಿದ  ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಸ್ನೇಹಿ ವಾತಾವರಣವನ್ನು ನಿರ್ಮಿಸಲು, ಈ ಎಲ್ಲಾ ಕಾಯ್ದೆಗಳನ್ವಯ 18 ವರ್ಷದೊಳಗಿನ ಯಾವುದೇ ಮಕ್ಕಳಿಗೆ ದೈಹಿಕ, ಮಾನಸಿಕ, ಶಾಬ್ಧಿಕವಾಗಿ ಲೈಂಗಿಕ ಹಲ್ಲೆ, ಹಿಂಸೆ ಮತ್ತು ಕಿರುಕುಳವನ್ನು ನೀಡುವುದನ್ನು ನಿಷೇಧಿಸಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ , ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತ ರವಿಕುಮಾರ ಪವಾರ ಅವರು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ಬಸವರಾಜ ಮೇಟಿ, ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕಿ ಶಾರದಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ, ಗ್ರೇಡ್-2 ತಹಶೀಲ್ದಾರ ವಿಶ್ವನಾಥ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮತ್ತು ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು
Total Views 19
RELATED ARTICLES

Most Popular

Recent Comments

KNN City News
Home
E-Paper