
ಬೆಳಗಾವಿ
ಇಲ್ಲಿನ ಮಹಾಂತೇಶ ನಗರದಲ್ಲಿನ ಕೆಎಂಎಫ್ ಡೈರಿ ಬಳಿ ಪ್ರಣೀತ್ ಕುಮಾರ ಮೇಲೆ ಗುಂಡಿನ ದಾಳಿ ನಡೆಸಿದ ಸ್ಮೀತಾ, ನಾಜೀಯಾ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿ ಗುರುವಾರ ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಗುಂಡಿನ ದಾಳಿಯಲ್ಲಿ ಇನ್ನೂ ಇಬ್ಬರೂ ಆರೋಪಿಗಳು ಪರಾರಿಯಾಗಿದ್ದು, ಮಾಳಮಾರುತಿ ಪೊಲೀಸ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವಿಶೇಷ ಪೊಲೀಸ್ ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ
