ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ, ಬಾನಾಪುರ ಮಹಾತ್ಮ ಗಾಂಧಿ , ಮುನಿರಾಬಾದಗೆ ಹುಲಿಗೆಮ್ಮ ದೇವಿ ಹೆಸರು
ಕನ್ನಡಮ್ಮ ಸುದ್ದಿ-ಕೊಪ್ಪಳ: ಜಿಲ್ಲೆಯ ಗಂಗಾವತಿ, ಮುನಿರಾಬಾದ್, ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣಕ್ಕೆ ಸರ್ಕಾರದಿಂದ ಶಿಫಾರಸ್ಸು ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವುರು ಈ ಕುರಿತು ಮಾಹಿತಿ ನೀಡಿದ್ದು,
Total Views 13

ಈ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ.