
ಬೆಳಗಾವಿ
ವಿಧಾನ ಪರಿಷತ್ತಿನ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆಕೇಪಾರ್ಹ ಪದ ಬಳಕೆ ಮಾಡಿರುವ ಮಾಜಿ ಸಚಿವ ಸಿ.ಟಿ.ರವಿಗೆ ಹೈ ಕೋಟ್೯ ಷರತ್ತು ಬದ್ಧ ಜಾಮೀನು ನೀಡಿ ಶುಕ್ರವಾರ ಆದೇಶ ನೀಡಿದೆ.
ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಬೆಳಗ್ಗೆಯಿಂದ ಸಿ.ಟಿ.ರವಿಯನ್ನು ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಮಧ್ಯಾಹ್ನ ಬೆಂಗಳೂರಿನ ಜನಪ್ರತಿನಿದಿಗಳ ಕೋಟ್೯ಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕರೆದೊಯ್ಯುವ ವೇಳೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಬೇಕೆಂದು ಸಿ.ಟಿ.ರವಿಗೆ ಸೂಚನೆ ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ಕೋರ್ಟ್ ನಲ್ಲಿ ಸಿ.ಟಿ ರವಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಆರಂಭಿಸಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ರೇ, ಸಿ.ಟಿ ರವಿ ಪರವಾಗಿ ಅಶೋಕ್ ಹಾರನಹಳ್ಳಿ ಪ್ರತಿವಾದ ಮಂಡಿಸಿದರು.
ವಾದ ಪ್ರತಿ ವಾದಗಳನ್ನು ಆಲಿಸಿದಂತ ನ್ಯಾಯಾಲಯವು, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ತಕ್ಷಣವೇ ಬಿಡುಗಡೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.
