Monday, November 23, 2026
HomeKoppalಕಾರ್ಮಿಕ ವರ್ಗದ ಬೇಡಿಕೆ ಈಡೇರಿಸಲು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನೆ

ಕಾರ್ಮಿಕ ವರ್ಗದ ಬೇಡಿಕೆ ಈಡೇರಿಸಲು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನೆ

ಕನ್ನಡಮ್ಮ ಸುದ್ದಿ-ಕೊಪ್ಪಳ : ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕರ ನ್ಯಾಯಾಲಯಗಳನ್ನು ಸ್ಥಾಪಿಸಬೇಕು, ಮಹಿಳಾ ಕಾರ್ಮಿಕರನ್ನು ರಾತ್ರಿ ಪಾಳೆಯಲ್ಲಿ ಅಪಾಯಕಾರಿ ಕೆಲಸಗಳಲ್ಲಿ ದುಡಿಸಿಕೊಳ್ಳಬಾರದು ಸೇರಿದಂತೆ ರಾಜ್ಯದ ಕಾರ್ಮಿಕ ವರ್ಗದ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಎಲ್ಲ ವಿಭಾಗಗಳಲ್ಲಿ ದುಡಿಯುವ ಮಹಿಳೆಯರಿಗೆ ವರ್ಷದಲ್ಲಿ 12 ದಿನ ಕನಿಷ್ಠ ವೇತನ ಸಹಿತ ಮುಟ್ಟಿನ ರಜೆ ನೀಡಬೇಕು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಸಂಘಟಿತ ಕಾರ್ಮಿಕರ ಕಲ್ಯಾಣ ಹಾಗೂ ಇತ್ತೀಚೆಗೆ ರಚಿಸಲಾದ ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿಯ ತ್ರಿಪಕ್ಷೀಯ ಮಂಡಳಿಯಲ್ಲಿ ಸಿಐಟಿಯು ಪ್ರತಿನಿಧಿಗಳನ್ನು ಸೇರ್ಪಡೆ ಮಾಡಬೇಕು ಎಂದು ಸಿಐಟಿಯು ಕಾರ್ಯದರ್ಶಿ ಕಾಸಿಂ ಸರ್ದಾರ ಆಗ್ರಹಿಸಿದರು.ಕರ್ನಾಟಕ ಕಾರ್ಮಿಕ ಅಧ್ಯಯನ ಸಂಸ್ಥೆಯನ್ನು ಬಲಪಡಿಸಿ ಅಭಿವೃದ್ಧಿ ಪಡಿಸಬೇಕು. ಕರ್ನಾಟಕ ಕಾರ್ಮಿಕ ಸಮ್ಮೇಳನ ನಡೆಸಬೇಕು, ಬಿಸಿಯೂಟ ಯೋಜನೆಯ ಯಾವುದೇ ಸ್ವರೂಪದ ಖಾಸಗೀಕರಣ ಕೈಬಿಡಬೇಕು. ನೌಕರರಿಗೆ ವೇತನ ಹೆಚ್ಚಿಸಬೇಕು, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಸಿಐಟಿಯು ಕಾರ್ಯದರ್ಶಿ ಕಾಸಿಂ ಸರ್ದಾರ, ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್, ಲಕ್ಷ್ಮೀದೇವಿ ಸೋನಾರ್ ಮಂಜುನಾಥ್ ಡಿಗ್ಗಿ, ಶಿವನಗೌಡ, ಅನ್ನಪೂರ್ಣ, ಅಲಿಮಾ, ಗಂಗಮ್ಮ, ದುರ್ಗಮ್ಮ, ಹನುಮೇಶ ನಿಲೋಗಲ್, ಇಸ್ಮಾಯಿಲ್‌, ಮಂಜಪ್ಪ, ಶಿವಾನಂದ ಬಾರಕೇರ, ತಾಜುದ್ದೀನ್ ವಾಸೀಂ, ಕೃಷ್ಣಪ್ಪ ನಾಯಕ, ರಮೇಶ ಹಮಿದಾಬಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Total Views 36
RELATED ARTICLES

Most Popular

Recent Comments

KNN City News
Home
E-Paper