ಕನ್ನಡಮ್ಮ ಸುದ್ದಿ-ಕೊಪ್ಪಳ: ಗ್ರಾಮೀಣ ಭಾಗದ ಮಾನವ ಸಂಪನ್ಮೂಲಗಳ ಅಭಿವೃದ್ಧಿಪಡಿಸಲು ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಹೆಚ್.ಟಿ ಪಾರೇಖ್ ಫೌಂಡೇಶನ್ ಹಾಗೂ ಕಲಿಕೆ-ಟಾಟಾ ಟ್ರಸ್ಟ್÷್ಸನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಸಾಮರ್ಥ್ಯ ಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಗ್ರಂಥಾಲಯಗಳ ಕಾರ್ಯ ಚಟುವಟಿಕೆಗಳು ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ ವರ್ಷ ರಾಷ್ಟç ಪ್ರಶಸ್ತಿ ಲಭಿಸಿದೆ. ಕೇರಳದ ಬಳಿಕ ಅತೀ ಹೆಚ್ಚು ಗ್ರಂಥಾಲಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ನಮ್ಮ ಕರ್ನಾಟಕ ರಾಜ್ಯವು ಸದ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಇಂತಹ ಕಾರ್ಯ ಚಟುವಟಿಕೆಗಳು ಕಲ್ಯಾಣ ಕರ್ನಾಟಕ ಭಾಗದಿಂದ ವಿಶೇಷವಾಗಿ ಕೊಪ್ಪಳ ಜಿಲ್ಲೆಯಿಂದಲೇ ಮೊದಲು ಪ್ರಾರಂಭವಾಗಿವೆ. ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಗ್ರಂಥಾಲಯವು ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಬದಲಾವಣೆ ತರಲು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಸಂಸ್ಥೆಯಾಗಿದೆ. ಗ್ರಾ.ಪಂ ಜೊತೆಗೆ ಇತರ ಗ್ರಾಮೀಣ ಭಾಗಗಳಲ್ಲಿ 155 ಕಡೆ ಗ್ರಾಮೀಣ ಗ್ರಂಥಾಲಯಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ,

