ಕನ್ನಡಮ್ಮ ಸುದ್ದಿ-ಕೊಪ್ಪಳ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೊಪ್ಪಳ ಸಂಸದರ ದತ್ತು ಗ್ರಾಮವಾಗಿ ಆಯ್ಕೆಯಾದ ಲೇಬಗೇರಿ ಗ್ರಾಮ ಪಂಚಾಯತಿಯ ಕಾಮನೂರು ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ನೀಡಿ, ಸಂಜಿವಿನಿ ಸಂಘದ ಶೆಡ್ ನಿರ್ಮಾಣ, ಶಾಲಾ ಶೌಚಾಲಯ, ಚರಂಡಿ ನಿರ್ಮಾಣ, ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ಮಾರ್ಕೌಟ್ ಮಾಡಿರುವ ಕುರಿತು ಪರಿಶೀಲಿಸಿದರು.
ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ ಎಲ್ಲಾ ಕಾಮಗಾರಿಗಳು ಮುಕ್ತಾಯವಾಗಬೇಕು. ಯಾವುದೇ ರೀತಿಯಾಗಿ ಕಾಮಗಾರಿಗಳು ಅಪೂರ್ಣವಾಗುವಂತಿಲ್ಲ. ಅಂದಾಜು ಪತ್ರಿಕೆಯಲ್ಲಿ ಕಾಣಿಸಿದಂತೆ ಐಟಂವಾರು ಕಾಮಗಾರಿಗಳು ಅನುಷ್ಟಾನಿಸಬೇಕೆಂದು ಕಟ್ಟು ನಿಟ್ಟಾಗಿ ಸೂಚಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ತರಗತಿಗೆ ವಿದ್ಯಾರ್ಥಿಗಳ ಕೊಠಡಿಗೆ ಭೇಟಿ ನೀಡಿ ಕನ್ನಡ ಬರವಣಿಗೆ ಹಾಗೂ ಗಣಿತ ಕಲಿಕಾ ಸಾಮಾರ್ಥ್ಯ ಇರುವ ಕುರಿತು ಪರಿವೀಕ್ಷಣೆ ಮಾಡಿದರು. ಬಳಿಕ ಕೆಲ ಮನೆಗಳಿಗೆ ಭೇಟಿ ನೀಡಿ ಶೌಚಾಲಯ ಇರುವ ಬಗ್ಗೆ ಮಾಹಿತಿ ಪಡೆದು ಪ್ರತಿ ದಿನ ಶೌಚಾಲಯ ಬಳಕೆ ಮಾಡುವಂತೆ ಮನವೋಲಿಸಿದರು. ಗ್ರಾಮದಲ್ಲಿ ಜನಪ್ರತಿನಿಧಿಗಳು, ಗ್ರಾಮಸ್ಥರು, ಅಧಿಕಾರಿಗಳ ಸಹಭಾಗಿತ್ವದಲ್ಲಿ ಒಂದು ದಿನ ಇಡೀ ಗ್ರಾಮವನ್ನು ಸ್ವಚ್ಛಗೊಳಿಸಲು ಶ್ರಮದಾನ ಕಾರ್ಯಕ್ರಮವನ್ನು ಜರುಗಿಸಲು ಶೀಘ್ರದಲ್ಲಿ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದರು. ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂಗಮೇಶ ತೇರಿನ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಹಾಯಕ ಮಲ್ಲಿಕಾರ್ಜುನ ಮೇಗಳಮನಿ, ಮಂಜುನಾಥ ಮಾದಾಪುರ, ಬಿಎಪ್.ಟಿ ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.
