Monday, November 23, 2026
HomeKoppalಪೌರಕಾರ್ಮಿಕರಿಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪಿಸಲಿ ಅಗತ್ಯಕ್ರಮ :  ಡಿಸಿ ನಲಿನ್ ಅತುಲ್

ಪೌರಕಾರ್ಮಿಕರಿಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪಿಸಲಿ ಅಗತ್ಯಕ್ರಮ :  ಡಿಸಿ ನಲಿನ್ ಅತುಲ್

ಕೊಪ್ಪಳ : ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ

ಕನ್ನಡಮ್ಮ ಸುದ್ದಿ-ಕೊಪ್ಪಳ : ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಪ್ರತಿ ತಿಂಗಳೂ ಸರಿಯಾಗಿ ವೇತನ ನೀಡುವುದರ ಜೊತೆಗೆ ಇಎಸ್‌ಐ ಮತ್ತು ಪಿಎಫ್ ವಂತಿಕೆಯನ್ನು ಸಕಾಲದಲ್ಲಿ ಪಾವತಿಸಬೇಕು. ಮಾಸಿಕ ವೇತನ ಹಾಗೂ ಇಎಸ್‌ಐ ಮತ್ತು ಪಿಎಫ್ ವಂತಿಕೆ ಪಾವತಿ ಯಾವುದಾದರೂ ಬಾಕಿ ಇದ್ದಲ್ಲಿ, ಅದನ್ನು ತ್ವರಿತವಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಪೌರಕಾರ್ಮಿಕರಿಗೆ ವರ್ಷದಲ್ಲಿ ಎರಡು ಜೊತೆ ಸಮವಸ್ತ್ರಗಳನ್ನು ಕಡ್ಡಾಯವಾಗಿ ವಿತರಿಸಿ, ಅವಶ್ಯಕತೆಗಳಿಗೆ ಅನುಗುಣವಾಗಿ ಸುರಕ್ಷಾ ಪರಿಕರಗಳಾದ ಮಾಸ್ಕ್, ಶೂಸ್, ಹ್ಯಾಂಡ್ ಗ್ಲೌಸ್, ರೇನಕೋಟ್ ಮತ್ತು ಹೆಲ್ಮೆಟ್‌ಗಳನ್ನು ಸರಿಯಾದ ಸಮಯದಲ್ಲಿ ವಿತರಣೆ ಮಾಡಬೇಕು. ಪ್ರತಿದಿನ ಉತ್ತಮ ಟಿಫಿನ್ ವ್ಯವಸ್ಥೆ ಮಾಡಬೇಕು ಎಂದರು.

ಪೌರಕಾರ್ಮಿಕರ ಆರೋಗ್ಯ ತಪಾಸಣೆಯನ್ನು ನಿಯಮಾನುಸಾರ ಕೈಗೊಳ್ಳಬೇಕು. ಅಲ್ಲದೇ ವಿವಿಧ ಯೋಜನೆಗಳಡಿ ಸಫಾಯಿ ಕರ್ಮಚಾರಿಗಳಿಗೆ ಇರುವ ಸೌಲಭ್ಯಗಳನ್ನೂ ಸಹ ನಿಗದಿತ ಅವಧಿಯಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ರತ್ನಂ ಪಾಂಡೇಯ, ಎಸ್ಪಿ ಡಾ ರಾಮ್ ಎಲ್ ಅರಸಿದ್ದಿ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ವಿಜಿಲೆನ್ಸ್ ಸಮಿತಿ ಸದಸ್ಯರು ಇತರರು ಭ಻ಗವಹಿಸಿದ್ದರು.

Total Views 23
RELATED ARTICLES

Most Popular

Recent Comments

KNN City News
Home
E-Paper