Monday, November 23, 2026
HomeKoppalಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ :  ‘ಸಕಲಚೇತನ’  ಜಾಗೃತಿ ಜಾಥಾ ನಿಮಿತ್ಯ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ :  ‘ಸಕಲಚೇತನ’  ಜಾಗೃತಿ ಜಾಥಾ ನಿಮಿತ್ಯ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಕನ್ನಡಮ್ಮ ಸುದ್ದಿ-ಕೊಪ್ಪಳ : ಸಂಸ್ಥಾನ ಶ್ರೀ ಗವಿಮಠದಜಾತ್ರಾ ಮಹೋತ್ಸವವೆಂದರೆ, ವಿನೂತನ ವಿಶೇಷತೆಯ ಹೊಸತನದ ಆಧುನಿಕ ಸ್ಪರ್ಷತೆಯ ಸಂಗಮ. ಪ್ರತಿ ವರ್ಷ ಒಂದಲ್ಲಾ ಒಂದು ರೀತಿಯ ಜನ ಜೀವನದ ಪ್ರಗತಿಗೆ ಜಾಗೃತಿ ಮೂಡಿಸಲು ಅಗತ್ಯವಾದ ಉಪಯುಕ್ತ ಜನ ಜಾಗೃತಿ ಕಾರ್ಯಕ್ರಮವಾಗಿದೆ. ಈ ವರ್ಷವೂ ಸಹ ವಿನೂತನವಾದ ಜಾಗೃತಿ ಮೂಡಿಸಲು ಶ್ರೀಮಠವು ಹೊಸ ಸಂಕಲ್ಪದೊಂದಿಗೆ ಸಿದ್ಧವಾಗಿದೆ.

ಪ್ರಸ್ತುತಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2025 ರ ಸಾಮಾಜಿಕ ಜಾಗೃತಿ ವಿಷಯವಾಗಿ ‘ಸಕಲಚೇತನ’ ಎಂಬ ಶೀರ್ಷಿಕೆಯ ಅಡಿಯಲ್ಲಿ ವಿಕಲಚೇತನರ ನಡೆ ಸಕಲ ಚೇತನದ ಕಡೆ ಎಂಬ ಘೋಷ ವಾಕ್ಯದೊಂದಿಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜ. 11 ಕೊಪ್ಪಳದ ಬಾಲಕಿಯರ ಸರಕಾರಿಕಾಲೇಜಿನ ಮೈದಾನ (ತಾಲೂಕುಕ್ರೀಡಾಂಗಣ) ದಿಂದ ಆರಂಭವಾಗಿ ಅಶೋಕ ವೃತ್ತ, ಜವಾಹರರಸ್ತೆ, ಗಡಿಯಾರಕಂಬದ ಮೂಲಕ ಶ್ರೀಗವಿಮಠದ ಜಾತ್ರಾ ಮಹಾದಾಸೋಹಕ್ಕೆತಲುಪಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯವಾಗಲಿದೆ.

ಸದರಿಅಭಿಯಾನದ ಅಂಗವಾಗಿ ಜ. 2 ರಂದು ಸ್ಥಳಿಯ ಶಾಲಾ, ಕಾಲೇಜು ಮಟ್ಟದಲ್ಲಿಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ವಿಕಲಚೇತನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಮಾಜದ ಸ್ಪಂದನೆ ಎಂಬ ವಿಷಯದ ಭಾಷಣ ಸ್ಪರ್ಧೆಯನ್ನುಆಯೋಜಿಸಲು ತಿಳಿಸಲಾಗಿದೆ.  ಈ ಸ್ಥಳಿಯ ಶಾಲಾ, ಕಾಲೇಜು ಮಟ್ಟದಲ್ಲಿಆಯ್ಕೆಯಾದ ವಿದ್ಯಾರ್ಥಿಗಳಿಗೆ ಸದರಿ ವಿಷಯದ ಮೇಲೆ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜ. 04 ಶನಿವಾರದಂದು ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಾಗೃತಿಜಾಥಾ ನಡಿಗೆ ಯಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9742307153, 9986591076 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಲು ಗವಿಮಠ ಪ್ರಕಟಣೆಯಲ್ಲಿ ತಿಳಿಸಿದೆ.

Total Views 117
RELATED ARTICLES

Most Popular

Recent Comments

KNN City News
Home
E-Paper