ಕನ್ನಡಮ್ಮ ಸುದ್ದಿ-ಕೊಪ್ಪಳ : ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರು, ದೂರದೃಷ್ಟಿಯ ನಾಯಕರು, ಭಾರತದ ನೈಜ ರತ್ನರಾದ ಮಾಜಿ ಪ್ರಧಾನಿ ಡಾ:ಮನಮೋಹಸಿಂಗರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಡೀ ಪ್ರಪಂಚವೆ ಆರ್ಥಿಕ ಕುಸಿತದಲ್ಲಿದ್ದಾಗ ತಮ್ಮ ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವದ ಮುಖಾಂತರ ಭಾರತದ ಆರ್ಥಿಕತೆಯನ್ನು ರಕ್ಷಿಸಿದ ಪರಿಯೆ ಒಂದು ಅದ್ಭುತ.
ತಮ್ಮ ಕಾರ್ಯಗಳ ಮುಖಾಂತರವೇ ಮಾತನಾಡಿದ ಮುತ್ಸದ್ದಿ ನಾಯಕನನ್ನು ಕಳೆದುಕೊಂಡದ್ದು ಮನಸ್ಸಿಗೆ ಅತೀವ ನೋವುಂಟು ಮಾಡಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
