
ಬೆಳಗಾವಿ
ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಮಾಡುತ್ತಿದ್ದ ಬಿಲ್ವಪತ್ರೆ ಗಿಡ ನೆಡುವ ಕಾರ್ಯ ಮಾಡುತ್ತಿರುವ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರ ಕಾರ್ಯ ಶ್ಲಾಘನೀಯ ಎಂದು ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು.
ಶುಕ್ರವಾರ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವಧೂತ ಶ್ರೀ ವಿನಯ ಗುರೂಜಿ ಭೇಟಿಯಾಗಿ ಆಶೀರ್ವಾದ ಪಡೆದು, ತಾವು ಮಾಡುತ್ತಿರುವ ಕಾರ್ಯದ ಬಗ್ಗೆ ಗುರೂಜಿ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರೂಜಿ, ಸರ್ವಲೋಕಾ ಸೇವಾ ಫೌಂಡೇಶನ್ ಉತ್ತಮವಾದ ಕೆಲಸ ಮಾಡುತ್ತಿದೆ. ಗಿಡ, ಮರಗಳ ಬುಡದಲ್ಲಿ ಮುಕ್ಕಾದ ದೇವರ ಫೋಟೋಗಳನ್ನು ಶಾಸ್ತ್ರೋಕ್ತವಾಗಿ ವಿಧಿವಿಧಾನ ಮಾಡುವುದರ ಮೂಲಕ ಧರ್ಮದ ಕಾರ್ಯ ಮಾಡುತ್ತಿದ್ದಾರೆ. ನೀವು ಮಾಡುವ ಕಾರ್ಯಕ್ರಮಕ್ಕೆ ನಮಗೂ ಆಹ್ವಾನ ಮಾಡಿ ಖಂಡಿತ ಬರುತ್ತೇವೆ ಎಂದರು.
ಮಾರುತಿ ಚಿವಗೋಲ್, ಸನ್ನಿ ನರುಗೋಳ,. ಪ್ರಜ್ವಲ್ ನೀಲಜಗಿ, ವಿನಯ್ ಉಂಡಲೆ ಉಪಸ್ಥಿತರಿದ್ದರು.
