ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷರಾಗಿ ಬಸವರಾಜ ಗುಡ್ಲಾನೂರ ಆಯ್ಕೆ
ಕನ್ನಡಮ್ಮ ಸುದ್ದಿ-ಕೊಪ್ಪಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಜಿಲ್ಲಾ ಘಟಕಕ್ಕೆ ಗೌರವ ಅಧ್ಯಕ್ಷರಾಗಿ ಸಂಘದ ನಿಕಟ ಪೂರ್ವ ಅಧ್ಯಕ್ಷರು ಹಾಗೂ ವಿನಯವಾಣಿ ಪತ್ರಿಕೆಯ ಸಂಪಾದಕರಾದ ಬಸವರಾಜ ಗುಡ್ಲಾನೂರ ಆಯ್ಕೆಗೊಂಡಿದ್ದಾರೆ.
Total Views 22

ಕೆಯುಡಬ್ಲ್ಯೂಜೆ ಕೊಪ್ಪಳ ಜಿಲ್ಲಾ ಘಟಕಕ್ಕೆ ಅಧ್ಯಕ್ಷರಾಗಿದ್ದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹನುಮಂತ ಹಳ್ಳಿಕೇರಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಸಂಘಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಜಿಲ್ಲಾ ಸಂಘಕ್ಕೆ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಹನುಮಂತ ಹಳ್ಳಿಕೇರಿ ಅವರಿಗೆ ಸಂಘಟನೆ ಬೆಳೆಸುವ ಮತ್ತು ಸಂಘದ ಅಭಿವೃದ್ಧಿ ಕೆಲಸದಲ್ಲಿ ಸಂಪೂರ್ಣ ಸಹಕಾರ ನೀಡುವದಾಗಿ ಬಸವರಾಜ ಗುಡ್ಲಾನೂರ್ ಹೇಳಿದರು