Monday, November 23, 2026
HomeBelagaviಸಿ.ಟಿ.ರವಿ ಬೇದರಿಕೆ ಪತ್ರ ಅವರೇ ಬರೆದುಕೊಂಡಿರಬೇಕು: ಸಚಿವ ಎಂಬಿಪಾ

ಸಿ.ಟಿ.ರವಿ ಬೇದರಿಕೆ ಪತ್ರ ಅವರೇ ಬರೆದುಕೊಂಡಿರಬೇಕು: ಸಚಿವ ಎಂಬಿಪಾ

ಬೆಳಗಾವಿ

ಸಚಿವರು ತಮ್ಮ ಮನೆಗಲ್ಲಿ ಡಿನ್ನರ್ ಆಯೋಜನೆ ಮಾಡಿರುವುದಕ್ಕೆ ಮಹತ್ವ ಕೊಡಬೇಕಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತಬಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗೆ ಊಟಕ್ಕೆ ಹೋಗಿದ್ದಾರೆ. ನನ್ನ ಮನೆಗೂ ಮುಖ್ಯಮಂತ್ರಿಗಳು ಊಟಕ್ಕೆ ಬಂದಿದ್ದಾರೆ. ವಿರೋಧ ಪಕ್ಷದವರು ಊಟಕ್ಕೆ ಬರುತ್ತಾರೆ. ನಾವು ಹೋಗುತ್ತೇವೆ. ಅದರಲ್ಲಿ ಏನು ತಪ್ಪು ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
ಬಿಜೆಪಿ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿಗೆ ಬೇದರಿಕೆ ಪತ್ರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿ.ಟಿ.ರವಿ ಅವರೇ ಬೇದರಿಕೆಯ ಪತ್ರವನ್ನು ಬರೆದು ಕಥೆ ಕಟ್ಟುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಸಿಎಲ್ ಪಿ ಸಭೆ ನಡೆಯುತ್ತಿದೆ. ಜ.21ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇವತ್ತಿನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆಗಮಿಸಲಿದ್ದಾರೆ. ಕಾಂಗ್ರೆಸ್ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸುವ ಕುರಿತು ಸ್ಪಷ್ಟನೆ ನೀಡಲಿದ್ದಾರೆ ಎಂದರು.

Total Views 250
RELATED ARTICLES

Most Popular

Recent Comments

KNN City News
Home
E-Paper