
ಬೆಳಗಾವಿ
ಬೆಂಗಳೂರಿನಲ್ಲಿ ನಡೆದ ಸಿಎಲ್ ಪಿ ಸಭೆ ಮುಗಿಸಿಕೊಂಡು ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರು ಮಂಗಳವಾರ ಬೆಳಗ್ಗೆ ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತ ನಡೆದಿದೆ. ಕಾರಿಗೆ ನಾಯಿ ಅಡ್ಡ ಬಂದ್ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ. ಕಾರು ನುಜ್ಜು ನುರಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ದಾಖಲಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
