
ಬೆಳಗಾವಿ
ರಾಜ್ಯ ಬಜೆಟ್ ಬಳಿಕ ಸಚಿವ ಸಂಪುಟದ ವಿಸ್ತರಣೆ ಆಗಲಿದೆ ಎಂದು ರಾಮದುರ್ಗ ಶಾಸಕ ಅಶೋಕ ಪಟಣ್ಣ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನನಗೆ ಲಿಂಗಾಯತ ಕೋಟಾದಲ್ಲಿ ಸಚಿವ ಸ್ಥಾನ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ. ಅವರು ಸಹ ನಿನಗೆ ಮಂತ್ರಿ ಮಾಡುತ್ತೇನೆ ಎಂದಿದ್ದಾರೆ. ನಾನು ರಾಜಕೀಯದಲ್ಲಿ ಸನ್ಯಾಸಿ ಅಲ್ಲ. ಎಲ್ಲರಿಗೂ ಅಧಿಕಾರದ ಆಸೆ ಇರುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಹೈಕಮಾಂಡ್ ರಾಜೀನಾಮೆ ಕೊಡಿ ಎಂದರೆ ಕೊಡುತ್ತಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಈಗಾಗಲೇ ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸಿಎಂ, ಕೆಪಿಸಿಸಿ ಅಧ್ಯಕ್ಷರು ತಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಹೊರಟ್ಟಿದ್ದಾರೆ. ಹೈಕಮಾಂಡ್ ನಿರ್ಣಯ ಅಂತಿಮ ಎಂದರು.
