
ಬೆಳಗಾವಿ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಅಥಿತಿ ಶಿಕ್ಷಕನಿಗೆ ಸಾರ್ವಜನಿಕರು ಸೇರಿಕೊಂಡು ಥಳಿಸಿದ ಘಟನೆ ಚಿಕ್ಕೋಡಿ ಪಟ್ಟಣದ ಆರ್.ಡಿ.ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದಿದೆ.
ಅಥಿತಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕ ರಾಹುಲ್ ಓತಾರೆಯಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಅಸಭ್ಯ ವರ್ತನೆ ತೋರಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಆತನಿಗೆ ಥಳಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
