Thursday, November 19, 2026
HomeKoppalಕೊಪ್ಪಳದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕನ್ನಡಮ್ಮ ಸುದ್ದಿ-ಕೊಪ್ಪಳ :  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶ್ರೀ ಸವಿತಾ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ, ಸವಿತಾ ಮಹರ್ಷಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಜ್ಞಾನೇಶ್ವರ ಎನ್.ಹೆಚ್., ಜಿಲ್ಲಾ ಕಾರ್ಯದರ್ಶಿ ತುಕಾರಾಮ ಎನ್.ಹೆಚ್., ಮುಖಂಡರಾದ ಮಾರುತಿ ಸುಗುರ, ನಾಗರಾಜ ಕಂಪ್ಲಿ, ರವಿ ಕುಮಾರ, ಶಿವಮೂರ್ತಿ, ಕಲ್ಲಪ್ಪ ಹೊನ್ನುಂಚಿ, ಅನಂದ, ಮಹೇಶ ಸುಗುರ, ಈಶಪ್ಪ ಮಾದಿನಾಳ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಇತರರು ಇದ್ದರು.

Total Views 21
RELATED ARTICLES

Most Popular

Recent Comments

KNN City News
Home
E-Paper