
ಬೆಳಗಾವಿ
ಯುಗಾದಿ ಅಮವಾಸ್ಯೆಯ ನಿಮಿತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಶ್ರೀ ಶನೈಶ್ವರ ಮಂದಿರಕ್ಕೆ ತೆರಳಿ ಸರದಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದರು.
