![]()
ಬೆಳಗಾವಿ
ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯನ್ನು ಕರೆತರಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ.
ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ ಗಂಡು ಸಿಂಹ ಮಂಕಾಗಿತ್ತು.
