
ಬೆಳಗಾವಿ
ಬೆಳಗಾವಿಯ ಎಂಇಎಸ್ ಮುಖಂಡ ಶುಭಂ ಸೇಳಕೆ ಅವರಿಗೆ ಮರಾಠಿಗರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಕರ್ನಾಟಕ ಸರಕಾರದ ಪೊಲೀಸರು ಗಡಿಪಾರು ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಮಹಾರಾಷ್ಟ್ರ ಶಿವಸೇನೆ ಉದ್ಧವ ಠಾಕ್ರೆ ಬಣದ ಸಂಸದ ಅರವಿಂದ ಸಾವಂತ ಹೇಳಿದ್ದಾರೆ.
ಗುರುವಾರ ದೆಹಲಿಯ ಲೋಕಸಭಾ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮರಾಠಿಗರಿಗೆ ರಕ್ಷಣೆ ಇಲ್ಲ. ಮರಾಠಿಗರ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ಎಂಇಎಸ್ ಮುಖಂಡ ಶುಭಂ ಸೇಳಕೆ ವಿರುದ್ಧ ಕರ್ನಾಟಕದ ಪೊಲೀಸರು ಗಡಿಪಾರು ಮಾಡುವ ಹುನ್ನಾರ ನಡೆಸಿದ್ದಾರೆ. ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರುವಂತೆ ಹೇಳಿ ಉರಿಯುವ ಬೆಂಕಿಗೆ ತುಪ್ಪ ಸವರಿದ್ದಾರೆ.
