
ಬೆಳಗಾವಿ
ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಶಹಾಪುರದಲ್ಲಿ ನಡೆದಿದೆ.
ಬೆಳಗಾವಿ ನಗರದ ಸೇಂಟ್ರಾ ಆಸ್ಪತ್ರೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಓಂಕಾರ ಪವಾರ್(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಹಾಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಓಂಕಾರ್ ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಸತಾಯಿಸುತ್ತಿದ್ದ ಆಸ್ಪತ್ರೆಯವರು ಸಂಬಳಕ್ಕಾಗಿ ಮನವಿ ಮಾಡಿದರೂ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಓಂಕಾರ್ ಗೆ ಓರ್ವ ಮಗು ಇದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಆತ್ಮಹತ್ಯೆ ವಿಚಾರ ಗೊತ್ತಿದ್ದರೂ ಸ್ಥಳಕ್ಕೆ ಬಾರದೇ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರು ಮತ್ತು ಡ್ರೈವರ್ ಸಂಘಟನೆ ಮುಖಂಡರಿಂದ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆಯವರೇ ಸಾವಿಗೆ ಕಾರಣ ಅಂತಾ ಕುಟುಂಬಸ್ಥರ ಆರೋಪ ಮಾಡಿದ್ದಾರೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
