
ಬೆಳಗಾವಿ
ಸಂಕ್ರಾಂತಿಯ ಹಬ್ಬದಂದು ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತ ಆರೋಪಿ. ಮಧುಕರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ನಿವಾಸಿಯಾಗಿದ್ದಾನೆ. ಕಳೆದ ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಡೆದಿದ್ದ ಅಪಘಾತವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಗುದ್ದಿ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ ಲಾರಿ ಡ್ರೈವರ್ ವಿರುದ್ಧ ಕಿತ್ತೂರು ಠಾಣೆಯಲ್ಲಿ ಹೆಬ್ಬಾಳ್ಕರ್ ಕಾರು ಚಾಲಕ ಹಿಟ್ ಆ್ಯಂಡ್ ರನ್ ಕೇಸ್ ದಾಖಲಿಸಿದ್ದ. ಕಾರಿಗೆ ಟಚ್ ಆಗಿದ್ದ ಲಾರಿಯ ಬಣ್ಣ ಸೇರಿ ಸ್ಥಳದಲ್ಲಿ ಸಿಕ್ಕ ಸಾಕ್ಷಿ್ಳನ್ನ ಎಫ್‌ಎಸ್‌ಎಲ್ ಗೆ ರವಾನಿಸಿದ್ದ ಪೊಲೀಸರು. ಬಳಿಕ ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಲಾರಿ ಪತ್ತೆ ಹಚ್ಚಿ ಡ್ರೈವರ್ ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿ ಚಾಲಕ ಬಂಧನ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ ಎಸ್‌ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
