Monday, November 23, 2026
HomeBelagaviಸಿಎಂ ವಿರುದ್ಧ ಸಿಡಿದೆದ್ದ ಎಬಿವಿಪಿ

ಸಿಎಂ ವಿರುದ್ಧ ಸಿಡಿದೆದ್ದ ಎಬಿವಿಪಿ

ಬೆಳಗಾವಿ
ಇಲ್ಲಿನ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಸಮಾವೇಶದಲ್ಲಿ ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿ.ಭರಮನಿ ಅವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಎತ್ತಿರುವುದನ್ನು ಖಂಡಿಸಿ ಮಂಗಳವಾರ ಎಬಿವಿಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪಹಲ್ಗಾಮದಲ್ಲಿ ಹಿಂದುಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದನ್ನು ಇಡೀ ದೇಶವೇ ಕೆಂಡ ಕಾರುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಯುದ್ಧ ಮಾಡುವ ಅಗತ್ಯ ಇಲ್ಲ ಎಂದು ಹೇಳಿಕೆ ನೀಡಿರುವ ಸಿಎಂ ಇಡೀ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ‌ಮಹಿಳಾ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಗುಂಡಾಗಳನ್ನು ಬಿಟ್ಟು ಹಲ್ಲೆ ಮಾಡಿಸುವ ಯತ್ನ ಮಾಡಿದ್ದಲ್ಲದೆ, ಭದ್ರತೆಗೆ ಬಂದಿದ್ದ ಎಎಸ್ಸಿ ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದು ದುರಂತದ ಸಂಗತಿ ಎಂದರು.
ಕಾಂಗ್ರೆಸ್ ಪ್ರತಿಭಟನಾ ಸಮಾವೇಶಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂವಿಧಾನದ ಬಗ್ಗೆ ಮಾತನಾಡುವ ಸಿಎಂ ಒಬ್ಬ ಪೊಲೀಸ್ ಅಧಿಕಾರಿಯ ಮೇಲೆ ನಡೆದುಕೊಳ್ಳುವ ರೀತಿ ಸರಿಯಾದುದ್ದಲ್ಲ ಎಂದು ಪ್ರತಿಭಟನಾಕಾರರು ಖಂಡಿಸಿದರು.

Total Views 191
RELATED ARTICLES

Most Popular

Recent Comments

KNN City News
Home
E-Paper