Monday, November 23, 2026
HomeBelagaviಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರ ದಾರುಣ ಸಾವು

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರ ದಾರುಣ ಸಾವು

ಬೆಳಗಾವಿ
ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ ಮೂವರ ಸಾವು.
ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸ್ಥಳದಲ್ಲೇ ಮೃತಪಟ್ಟ ‌ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ಸೋಮವಾರ ನಡೆದಿದೆ.
ಬೈಲಹೊಂಗಲ ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬೈಲಹೊಂಗಲದಿಂದ‌ ಹಿರೇಬಾಗೇವಾಡಿಗೆ ಬರುತ್ತಿದ್ದ ಅಲ್ಟೋ ಕಾರು. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿಯಾಗಿ ಅಲ್ಟೋ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ‌. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಅಪಘಾತ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಕೀಯಾರಿನಲ್ಲಿದ್ದ ಇಬ್ಬರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದರ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Total Views 292
RELATED ARTICLES

Most Popular

Recent Comments

KNN City News
Home
E-Paper